shivamogga news today =ಜೂನ್ 27 : ಶಿವಮೊಗ್ಗದಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ವೈದ್ಯನ ಬಂಧನ

ಹಂಚಿಕೊಳ್ಳಿ
WhatsApp Facebook X Telegram
Lightning Strike Trading advertisement Current shock : Rippon pete Dasara Sports cyber crimeThreat case
Lightning Strike Trading advertisement Rippon pete Dasara Sports cyber crime Threat case

shivamogga news today : ಶಿವಮೊಗ್ಗದಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ವೈದ್ಯನ ಬಂಧನ

shivamogga news today : ಶಿವಮೊಗ್ಗ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸಕ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯರೊಬ್ಬರು ಅವರ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಹಾಗೂ ಎಂ.ಎಸ್ ಓದುತ್ತಿದ್ದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವೈದ್ಯರ ಮೇಲೆ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ ದೂರು ದಾಖಲಾದ ನಾಲ್ಕು ದಿನಗಳ ನಂತರವೂ ಆರೋಪಿಯ ಬಂಧನವಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ಕಾಲೇಜಿನ ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ನಗರದಲ್ಲಿ ಲಾಯರ್ಸ್ ಗಿಲ್ಡ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಸಹ ಇದರ ವಿರುದ್ದ ಪ್ರತಿಭಟನೆ ನಡೆಸಿದ್ದರು.

ಇದೀಗ ಡಿವೈಎಸ್‌ಪಿ ಬಾಬು ಅಂಜನಪ್ಪ ಅವರ ನೇತೃತ್ವದ ತಂಡ ಆರೋಪಿ ವೈದ್ಯರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor