sims college shivamogga :  ವೈದ್ಯನಿಗೆ ಜುಲೈ 04 ರ ವರೆಗೆ  ನ್ಯಾಯಾಂಗ ಬಂಧನ

This Article Written by / Prathapa thirthahalli / ಜೂನ್ 28, 2025

sims college shivamogga

sims college shivamogga :  ವೈದ್ಯನಿಗೆ ಜುಲೈ 04 ರ ವರೆಗೆ  ನ್ಯಾಯಾಂಗ ಬಂಧನ

ಶಿವಮೊಗ್ಗ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ವಿಚಾರಣೆ ನಡೆಸಿ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ, ನಿನ್ನೆ ತಲೆಮರೆಸಿಕೊಂಡಿದ್ದ ವೈದ್ಯನನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಂಧಿಸಿ ಶಿವಮೊಗ್ಗಕ್ಕೆ ಕರೆತಂದಿದ್ದರು.ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು ವೈದ್ಯನಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment