gautampura incident today : ಜೂನ್​ 30, ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿಹಾಕಿ ವೃದ್ದೆಯ ಮೇಲೆ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

gautampura incident today : ಜೂನ್​ 30 ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ :  ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವಯಸ್ಸಾದ ಅಜ್ಜಿಯೊಬ್ಬರಿಗೆ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಗೌತಮಪುರದಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆ ನಡೆಸಿದ ಮಹಿಳೆ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗೌತಮಪುರದ ನಿವಾಸಿ ಹುಚ್ಚಮ್ಮ ಎಂಬ ವೃದ್ಧೆಯ ಮನೆ ಕಡೆ ಪಕ್ಕದ ಮನೆಯ ಮಹಿಳೆಯೊಬ್ಬರು ಕಸ ತಂದು ಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದಾಗ, ಆ ಮಹಿಳೆ ಕೋಪಗೊಂಡು ಹುಚ್ಚಮ್ಮ ಅವರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ನಂತರ, ಹುಚ್ಚಮ್ಮ ಅವರ ಮಗ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ತಂದೆ-ತಾಯಿಗೆ ರಕ್ಷಣೆ ನೀಡಿ, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇಲೆ, ಹಲ್ಲೆ ನಡೆಸಿದ ಮಹಿಳೆ ಸೇರಿ ಮೂವರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

 

gautampura incident today ಅಜ್ಜಿಯ ಮೇಲೆ ಹಲ್ಲೆ ನಡೆಸುತ್ತಿರುವುದು
gautampura incident today ಅಜ್ಜಿಯ ಮೇಲೆ ಹಲ್ಲೆ ನಡೆಸುತ್ತಿರುವುದು

Leave a Comment