accident today : ಜುಲೈ 01  ಬೇಗುವಳ್ಳಿಯಲ್ಲಿ ಭೀಕರ ಅಪಘಾತ, ಓರ್ವ ಮಹಿಳೆ ಸಾವು 

accident today :  ಬೇಗುವಳ್ಳಿಯಲ್ಲಿ ಭೀಕರ ಅಪಘಾತ ಓರ್ವ ಮಹಿಳೆ ಸಾವು 

ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಗುವಳ್ಳಿ ಬಳಿ ಇಂದು ಮಧ್ಯಾಹ್ನ ಲಾರಿ ಮತ್ತು ಕಾರು ನಡುವೆ  ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರು  ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ, ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಅವರಲ್ಲಿ ಇಬ್ಬರು ಮಕ್ಕಳೂ ಇದ್ದರು. ಮೃತಪಟ್ಟವರ ಹೊರತುಪಡಿಸಿ ಉಳಿದ ಮೂವರು ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

accident today ಅಪಘಾತದಿಂದ ಕಾರಿನ ಮುಂಬಾಗ ಜಖಂಗೊಂಡಿರುವುದು
accident today ಅಪಘಾತದಿಂದ ಕಾರಿನ ಮುಂಬಾಗ ಜಖಂಗೊಂಡಿರುವುದು

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು