Shivamogga Taluk Schools Closed July Breaking news / ಶಿವಮೊಗ್ಗ ತಾಲ್ಲೂಕಿನಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:
Shivamogga news ಶಿವಮೊಗ್ಗ, ಜುಲೈ 4, 2025: ಶಿವಮೊಗ್ಗ ತಾಲ್ಲೂಕಿನಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ರಜೆ ಘೋಷಿಸಲಾಗಿದೆ. ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ರಜೆ ಅನ್ವಯವಾಗುತ್ತದೆ.
Shivamogga Taluk
ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನಷ್ಟು ಮಳೆ ಮುಂದುವರಿಯುವ ಸಾಧ್ಯತೆಗಳಿರುವುದರಿಂದ ಒಟ್ಟು ನಾಲ್ಕು ತಾಲ್ಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

ರಜಾ ಅವಧಿಯಲ್ಲಿ ತಪ್ಪಿದ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜಾ ದಿನಗಳಲ್ಲಿ ಸರಿಹೊಂದಿಸಿಕೊಳ್ಳುವಂತೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಮಳೆಯಿಂದ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಮನವಿ ಮಾಡಿದೆ.

ಇತರ ತಾಲ್ಲೂಕುಗಳಲ್ಲೂ ರಜೆ
ಸಾಗರ ಮತ್ತು ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿಯೂ ಸಹ ಇಂದು (ಜುಲೈ 4, 2025) ಭಾರೀ ಮಳೆಯ ಕಾರಣಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Holiday declared for all Anganwadi centers, primary, and high schools in Shivamogga taluk on July 4, 2025, due to widespread heavy rainfall. Classes to be compensated later.