sigandur bridge inauguration date : ಜುಲೈ 05 ಸಿಗಂದೂರು ಸೇತುವೆ ಲೋಕಾರ್ಪಣೆಗೆ ಡೇಟ್ ಫಿಕ್ಸ್ | ಬಿವೈ ರಾಘವೇಂದ್ರ ಹೇಳಿದ್ದೇನು
ಬಹು ನಿರೀಕ್ಷಿತ ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.
ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರುಭಾರತದ ಎರಡನೇ ಅತಿ ಉದ್ದದ ಈ ಸೇತುವೆಯನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಧ್ಯದಲ್ಲೇ ಸ್ಥಳವನ್ನು ನಿಗದಿಪಡಿಸುತ್ತೇವೆ ಎಂದರು.
ಸೇತುವೆಯ ಮೊದಲ ಹಂತದ ಲೋಡ್ ಟೆಸ್ಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಎರಡನೇ ಹಂತದ ಟೆಸ್ಟಿಂಗ್ ಶುಕ್ರವಾರ ನಡೆಯಬೇಕಿತ್ತು, ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಮುಂದೂಡಲ್ಪಟ್ಟಿತ್ತು. ಎರಡನೇ ಹಂತದ ಲೋಡ್ ಟೆಸ್ಟಿಂಗ್ ಇಂದು ನಡೆಸಲಾಗುವುದು ಎಂದು ಸಂಸದರು ಮಾಹಿತಿ ನೀಡಿದರು..
sigandur bridge inauguration date ಸಿಗಂದೂರು ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ
ಈ ಸೇತುವೆಯನ್ನು ಈಗ “ಹೊಳೆಬಾಗಿಲು ಕಳಸವಳ್ಳಿ ಸೇತುವೆ” ಎಂದು ಕರೆಯಲಾಗುತ್ತಿದೆ. ಆದರೆ, ಈ ಸೇತುವೆಗೆ “ಸಿಗಂದೂರು ಚೌಡೇಶ್ವರಿ ಸೇತುವೆ” ಎಂದು ನಾಮಕರಣ ಮಾಡಬೇಕು ಎಂಬುದು ನಮ್ಮ ಆಗ್ರಹ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿಗ ಮನವಿಯನ್ನು ಸಲ್ಲಿಸುತ್ತೇವೆ ಎಂದರು,