by vijayendra ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
by vijayendra ಒಂದೆಡೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ತಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡು ತಮಗೇ ತಾವೇ ಶಹಬ್ಬಾಸ್‌ಗಿರಿ ಕೊಟ್ಟುಕೊಳ್ಳುತ್ತಿದೆ. ಆದರೆ ವಾಸ್ತವಿಕ ಸತ್ಯ ಏನೆಂದರೆ, ಇಂದು ಮಹಾನಗರ ಪಾಲಿಕೆ ವಿಚಾರದಲ್ಲಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಲಾರಿ ಮಾಲೀಕರ ಹೇಳಿಕೆಯನ್ನೂ ಗಮನಿಸಿದ್ದೀರಿ. ಕಳೆದ ಮೂರ್ನಾಲ್ಕು ತಿಂಗಳಿಂದ ಸರ್ಕಾರ ಲಾರಿ ಬಾಡಿಗೆಯನ್ನು ನೀಡದೆ, ಅವರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.” ಎಂದು ವಿಜಯೇಂದ್ರ ಹೇಳಿದರು.
ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಅನ್ನಭಾಗ್ಯಕ್ಕೂ ಸರ್ಕಾರವೇ ಕನ್ನ ಹಾಕುತ್ತಿದೆ. ಹತ್ತು ಕೆ.ಜಿ. ಅಕ್ಕಿ ನೀಡುತ್ತೇವೆ ಎಂದವರು ಐದು ಕೆ.ಜಿ.ಗೆ ಇಳಿಸಿ, ಈಗ ಅದನ್ನು ಕೊಡುವುದನ್ನೇ ನಿಲ್ಲಿಸಲು ಹೊರಟಿದ್ದಾರೆ. ಒಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ. ಸರ್ಕಾರಕ್ಕೆ ಹಣ ಕ್ರೂಡೀಕರಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಕೂಡ ಪರದಾಡುತ್ತಿದೆ. ಅಭಿವೃದ್ಧಿ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗದೆ ಅವರ ಪಕ್ಷದ ಶಾಸಕರೇ ಬೀದಿಗಿಳಿದು ಹೋರಾಡುವಂತಾಗಿದೆ. ಒಟ್ಟಾರೆಯಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ.” ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಆಡಳಿತದ ಮೇಲೆ ತಮ್ಮ ನಿಯಂತ್ರಣ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರೂ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಇದು ವಾಸ್ತವಿಕ ಸತ್ಯ. ಬಸವರಾಜ ರಾಯರೆಡ್ಡಿಯವರೂ ಕೂಡ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆರ್ಥಿಕವಾಗಿ ರಾಜ್ಯ ಸಂಕಷ್ಟದಲ್ಲಿ ಸಿಲುಕಿದೆ ಎಂದು ವಿಜಯೇಂದ್ರ ಪ್ರತಿಪಾದಿಸಿದರು.
by vijayendra ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, “ಅಂದು ಸ್ವತಃ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆರ್‌ಸಿಬಿ ತಂಡ ಗೆದ್ದಾಗ ಅವರನ್ನು ವಿಧಾನಸೌಧದ ಎದುರು ಸನ್ಮಾನಿಸುತ್ತೇವೆ ಎಂದು ಪುಕ್ಕಟೆ ಪ್ರಚಾರ ಪಡೆಯಲು ಟ್ವೀಟ್ ಮಾಡಿದ್ದರು. ಈಗ ಸತ್ಯವನ್ನು ಮರೆಮಾಚಿ ಆರ್‌ಸಿಬಿ ತಂಡದ ಮೇಲೆ ಮತ್ತು ಕೆಸಿಬಿ ತಂಡದ ಮೇಲೆ ಆರೋಪ ಮಾಡುವುದು ಷಡ್ಯಂತ್ರ ಹಾಗೂ ಕುತಂತ್ರದಿಂದ ಕೂಡಿದೆ. ಹಠಕ್ಕೆ ಬಿದ್ದು ಕಾರ್ಯಕ್ರಮ ನಡೆಸಿದ್ದರ ಪರಿಣಾಮವೇ ಇಂದು ಕಾಲ್ತುಳಿತವಾಗಲು ಕಾರಣವಾಗಿದೆ. ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು, ಮತ್ತೊಬ್ಬರ ಮೇಲೆ ಇಂದು ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.
