Shivamogga Central Jail : ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ : ಎಸ್ಪಿ ಹೇಳಿದ್ದೇನು
ಶಿವಮೊಗ್ಗ, ಜುಲೈ 12, 2025: ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದರ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿಗಳು, ದೌಲತ್ ಅಲಿಯಾಸ್ ಗುಂಡ (30) ಎಂಬ ಅಪರಾಧಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರಚಿಕಿತ್ಸೆ ನಡೆಸಿದಾಗ ಗುಂಡನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಇರುವುದು ಪತ್ತೆಯಾಗಿದೆ.
- Advertisement -
ಶಸ್ತ್ರಚಿಕಿತ್ಸೆ ಮೂಲಕ ಮೊಬೈಲ್ ಅನ್ನು ಹೊರತೆಗೆಯಲಾಗಿದ್ದು, ಈ ಸಂಬಂಧ ಜೈಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಅಲ್ಲದೆ, ಈ ಅಸಹಜ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ತಿಳಿಸಿದರು.

TAGGED:shivamogga central jail

