ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

ಹಂಚಿಕೊಳ್ಳಿ
WhatsApp Facebook X Telegram
ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪ ನಿನ್ನೆ ಕಾರು ಬೈಕ್​ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ಧಾನೆ. ರಿಪ್ಪನ್​ಪೇಟೆಯ  ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ.  ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು, ಇನ್ನೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರಿಗೂ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇನ್ನೂ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ರಿಪ್ಪನ್​ ಪೇಟೆ ಪೊಲೀಸರು ಗಾಯಾಳು ವಿದ್ಯಾರ್ಥಿಗಳನ್ನ ತಮ್ಮ ಜೀಪ್​ನಲ್ಲಿಯೇ ರಿಪ್ಪನ್​ ಪೇಟೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಪೊಲೀಸರ ತುರ್ತುಸೇವೆಗೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ.  

BREAKING NEWS / ಅರಶಿನ ಗುಂಡಿ ಘಟನೆ  ಮಾಸುವ ಮುನ್ನವೆ ಮತ್ತೊಬ್ಬ ಯುವಕ ನೀರಿನಲ್ಲಿ ನಾಪತ್ತೆ! ಶಿವಮೊಗ್ಗದ ತುಂಗಾ ಡ್ಯಾಂ ಬಳಿ ಹುಡುಕಾಟ

ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. 

ಗಾಜನೂರು ಜಲಾಶಯದ ಮೇಲೆ ಹೋಗಲು ಅವಕಾಶ ನೀಡಲಾಗಿಲ್ಲ. ಆದರೆ ಚಾನಲ್​ ಪಕ್ಕದಲ್ಲಿ ಹೋದರೇ ಡ್ಯಾಂನ್ನ ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು ಅಲ್ಲದೆ, ಅಲ್ಲಿರುವ ಕಾಮಗಾರಿ ಸೇತುವೆಯ ಮೇಲೆ ಪ್ರವಾಸಿಗರು ಓಡಾಡುವುದು ಸಾಮಾನ್ಯ ಸಂಗತಿಯಾಗಿದೆ. ಅಲ್ಲಿಯೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳುತ್ತಿದ್ಧಾರೆ. 

ನಾಪತ್ತೆಯಾಗಿರುವ ಯುವಕನ್ನು ಮಿಳಘಟ್ಟ ಮೂಲದವನು ಎನ್ನಲಾಗಿದ್ದು ಹರೀಶ್ ಎಂದು ತಿಳಿದುಬಂದಿದೆ. ಈತನಿಗಾಗಿ ಗಾಜನೂರು ಡ್ಯಾಂ ಗೇಟ್​ನಿಂದ ಮುಂಭಾಗದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ತುಂಗಾನಗರ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ಇವತ್ತು ಕೂಡ ಸರ್ಚ್ ಆಪರೇಷನ್​ ನಡೆಸುವ ಸಾಧ್ಯತೆ ಇದೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor