Rain Holiday Declared ಮಳೆ ಮಳೆ ಅಬ್ಬರ, 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ
ಜಿಲ್ಲೆಯಾದ್ಯಂತ ಕಳೆದ 4 ದಿನಗಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾಗರ , ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ ಇಂದು (25)ರಜೆ ಘೋಷಿಸಲಾಗಿದೆ.
ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದ್ದು ಮುಂದಿನ ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲಾಗುವುದು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.