Shivamogga Tourism MP BYR 25 ಶಿವಮೊಗ್ಗ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಸದ ರಾಘವೇಂದ್ರ ಮನವಿ: ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ
Shivamogga Tourism MP BYR 25 ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ [Tourism Destinations] ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ನೆರವು ಪಡೆಯುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರು ಬೈಂದೂರು ವ್ಯಾಪ್ತಿಯಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ ಕ್ಲಸ್ಟರ್ [Spiritual Tourism Cluster] ಅನ್ನು ಸ್ಥಾಪಿಸುವಂತೆ ಮನವಿ ಮಾಡಿದ್ಧಾರೆ.
ಅಲ್ಲದೆ ಶಿವಮೊಗ್ಗದ ಗುಡ್ಡೆಕಲ್‌ನಲ್ಲಿ ವಿಶ್ವದ ಅತಿ ಎತ್ತರದ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆಯ ನಿರ್ಮಾಣ ಮತ್ತು ಈ ಯೋಜನೆಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರದಿಂದ ನೆರವು ನೀಡುವಂತೆ ರಾಘವೇಂದ್ರ ಮನವಿ ಮಾಡಿದರು.


ಸಂಸದರ ಮನವಿಗೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಇನ್ನೂ ಈ ಬಗ್ಗೆ ಈ ಯೋಜನೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದು, ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಹೊಸ ಉತ್ತೇಜನ ಸಿಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
Central Aid for MP B.Y. Raghavendra met Union Minister Gajendra Singh Shekhawat to request central assistance for developing Shivamogga’s tourism sector, including a spiritual tourism cluster and a tall Subramanya Swamy statue at Guddakal, receiving positive assurance.
ಬಿ.ವೈ. ರಾಘವೇಂದ್ರ, ಗಜೇಂದ್ರ ಸಿಂಗ್ ಶೇಖಾವತ್, ಸೋಮೇಶ್ವರ, ಕೊಲ್ಲೂರು, Central Government, Paduvarl, Someshwara, Kollur, Spiritual Tourism, Guddekal, Bala Subramanya Swamy Statue #SpiritualTourism