Shivamogga : ಶಿವಮೊಗ್ಗದಿಂದ ಮುಂಬೈಗೆ ಪ್ರಥಮ ಏರ್‌ಲಿಫ್ಟ್ : ಯುವತಿ ಬಗ್ಗೆ ವೈದ್ಯರು ಹೇಳಿದ್ದೇನು
ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.ಈ ಕುರಿತು ಖಾಸಗಿ ಆಸ್ಪತ್ರೆಯ ಐಸಿಯು ಕೇರ್ ವೈದ್ಯರಾದ ಡಾ. ರಾಕೇಶ್ ಮಾಹಿತಿ ನೀಡಿದ್ದಾರೆ.
Shivamogga ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಶಿವಮೊಗ್ಗಕ್ಕೆ ಬಂದ ನಂತರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಅಮೃತ್ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದಾಗ ಅವರಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿತ್ತು. ಅಮೃತ್ ಲೈಫ್‌ಲೈನ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ, ಮಾನ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ನಮ್ಮ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ನಮಗೆ ಆ ಯುವತಿಗೆ ಜ್ವರದ ತೀವ್ರತೆ ಹೆಚ್ಚಾಗಿ ಲಿವರ್ ಸಮಸ್ಯೆ ಇರುವುದು ತಿಳಿದು ಬಂದಿತು. ವೈದ್ಯಕೀಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ, ಮಾನ್ಯ ಅವರಿಗೆ ತಕ್ಷಣವೇ ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿದ್ದು, ಅದಕ್ಕಾಗಿ ಅವರನ್ನು ಮುಂಬೈಗೆ ಏರ್‌ಲಿಫ್ಟ್ ಮಾಡುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಡಾ. ರಾಕೇಶ್ ತಿಳಿಸಿದ್ದಾರೆ.

