Mookambika Express : ಮೂಕಾಂಬಿಕಾ ಎಕ್ಸ್‌ಪ್ರೆಸ್ ರೈಲಿಗಾಗಿ ಸಂಸದರ ಮನವಿ : ಏನಿದು ಸುದ್ದಿ
ಶಿವಮೊಗ್ಗ : ವಾರಕ್ಕೊಮ್ಮೆ ಸಂಚರಿಸುವ ರೈಲು ಸಂಖ್ಯೆ 10215/10216ರ ರೈಲಿಗೆ ಮೂಕಾಂಬಿಕಾ ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿ, ಅದನ್ನು ದಿನನಿತ್ಯದ ಸೇವೆಯಾಗಿ ಪರಿವರ್ತಿಸುವಂತೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹಾಗೆಯೇ, ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸುವಂತೆ, ಮತ್ತು ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದೂ ಸಂಸದರು ಮನವಿಯಲ್ಲಿ ಕೋರಿದ್ದಾರೆ.
ಸಂಸದ ಬಿ.ವೈ. ರಾಘವೇಂದ್ರ ಅವರ ಈ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮನವಿ ಮಾಡಿದ ವಿಷಯಗಳ ಕುರಿತು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


