Chikkamagaluru news : ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಂದ ಮಗ
ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ಸ್ವಂತ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಭವಾನಿ (52) ಹತ್ಯೆಯಾದ ದುರ್ದೈವಿ ಮಹಿಳೆಯಾಗಿದ್ದು, ಅವರ ಪುತ್ರ ಪವನ್ (28) ಕೊಲೆ ಆರೋಪಿ.
Chikkamagaluru news : ಹೇಗಾಯ್ತು ಘಟನೆ
ಕೂಲಿ ಕೆಲಸ ಮಾಡಿಕೊಂಡು ತಾಯಿಯೊಂದಿಗೆ ವಾಸವಿದ್ದ ಪವನ್, ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ಈ ವೇಳೆ ಯಾವುದೋ ವಿಚಾರಕ್ಕೆ ತಾಯಿಯೊಂದಿಗೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ಹೋಗಿ, ಆತ ತನ್ನ ತಾಯಿಯನ್ನು ಕೊಲೆ ಮಾಡಿದ್ದಾನೆ. ಆ ನಂತರ, ಪ್ರಜ್ಞಾಹೀನನಂತೆ ತಾಯಿಯ ಶವಕ್ಕೆ ಬೆಂಕಿ ಹಚ್ಚಿ, ನಿದ್ರೆಗೆ ಜಾರಿದ್ದಾನೆ ಎನ್ನಲಾಗಿದೆ.
ನೆರೆಹೊರೆಯವರಿಂದ ಮಾಹಿತಿ ಪಡೆದ ಆಲ್ಲೂರು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪವನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
