NSUI shivamogga : ಶಿವಮೊಗ್ಗದಲ್ಲಿ NSUI ವತಿಯಿಂದ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
NSUI shivamogga ಈ ಕುರಿತು ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ವರುಣ್ ವಿ. ಪಂಡಿತ್ ಮಾಹಿತಿ ನೀಡಿದ್ದು ಪ್ರತಿ ವರ್ಷದಂತೆ ಈ ವರ್ಷವು ಸಹ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ನಮ್ಮೂರ ಹೆಮ್ಮೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮದಲ್ಲಿ 95% ಗಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‍ಗಳಲ್ಲಿ ರ್ಯಾಂಕ್ ಗಳಿಸಿದ, ಯುಪಿಎಸ್‍ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿಧ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು 2025ನೇ ಆಗಸ್ಟ್ 8 ರ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು ಎಂದಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೋಂದಣಿ ಮಾಡಲು ಎನ್.ಎಸ್.ಯು.ಐ. ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ವರುಣ್ ವಿ. ಪಂಡಿತ್, ಮೊ: 88841 84955 ಇವರನ್ನು ಸಂಪರ್ಕಿಸಬಹುದು.
