ತೀರ್ಥಹಳ್ಲಿಯ ರಾಮೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಕಳ್ಳರು

prathapa thirthahalli
Prathapa thirthahalli - content producer

Thirthahalli theft case : ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಕಳ್ಳರು

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರು ಕಾಣಿಕೆ ಹುಂಡಿ ಒಡೆದು ಸಾವಿರಾರು ರೂಪಾಯಿ ಹಣವನ್ನು ದೋಚಿದ್ದಾರೆ.

ಮುಖಕ್ಕೆ ಮಾಸ್ಕ್​ ಧರಿಸಿ ಬಂದಿದ್ದ ಕಳ್ಳರು ದೇವಸ್ಥಾನದ ಅನ್ನದಾಸೋಹ ಕೊಠಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಬೇರೆ ದಿಕ್ಕಿಗೆ ತಿರುಗಿಸಿ, ಬೀರುವಿನ ಬಾಗಿಲು ಮುರಿದಿದ್ದಾರೆ. ನಂತರ, ಕೊಠಡಿಯಲ್ಲಿದ್ದ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಹಣ ಕಳವು ಮಾಡಿ ಪರಾರಿಯಾಗಿದ್ದಾರೆ.

- Advertisement -

ಘಟನೆಯ ಮಾಹಿತಿ ತಿಳಿದ ಕೂಡಲೇ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thirthahalli theft case
Thirthahalli theft case

 

Share This Article
Leave a Comment

Leave a Reply

Your email address will not be published. Required fields are marked *