ರಾಜ್ಯದ ದೇವಾಲಯಗಳಿಗೆ ಹೊಸ ಕಾನೂನು: ಮೀರಿದರೆ ಕ್ರಿಮಿನಲ್ ಪ್ರಕರಣ. ಏನದು 

prathapa thirthahalli
Prathapa thirthahalli - content producer

Karnataka tempel :ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳು 30 ಸಾವಿರಕ್ಕೂ ಹೆಚ್ಚಿದ್ದು. ಮುಜರಾಯಿ ಇಲಾಖೆ ಸಚಿವರು ಅವುಗಳಿಗೆ ಹೊಸದಾದ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ.

ಆಗಸ್ಟ್ 15 ರಿಂದ ರಾಜ್ಯದಾದ್ಯಂತ ಮುಜರಾಯಿ ಇಲಾಖೆಗೆ ಒಳಪಡುವ ಯಾವುದೇ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಬಳಸುವಂತಿಲ್ಲ ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು ದೇವಾಲಯದ ಆವರಣ ಸ್ವಚ್ಛತೆ ಕಾಪಾಡಲು ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಲಾಗಿದೆ‌.‌ ಇದೇ ತಿಂಗಳು ಈ ಕಾಯ್ದೆ ಇದೇ ತಿಂಗಳು 15ರಿಂದ ಆದೇಶ ಜಾರಿ ಬರಲಿದೆ ಎಂದರು.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದರೆ ದಂಡ ವಿಧಿಸಲು ಸಂಬಂಧಪಟ್ಟ ದೇವಾಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವುದು ಕಂಡುಬಂದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

Karnataka tempel

tempel

Share This Article