Agumbe Police Station : ಅಗುಂಬೆ ಹಾಗೂ ಸಾಗರದಲ್ಲಿ ಕಳೆದೆರಡು ದಿನದಲ್ಲಿ ಮೂರು ವಾಹಾನ ಅಪಘಾತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ
Agumbe Police Station ಕಾರು ಹಾಗೂ ಬೈಕ್ ನಡುವೆ ಅಪಘಾತ
ಆಗಸ್ಟ್ 16 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ERV ಸಿಬ್ಬಂದಿ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ಠಾಣೆಗೆ ಕೊಂಡೊಯ್ದಿದ್ದಾರೆ.
ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತೊಂದು ಘಟನೆಯಲ್ಲಿ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದರಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾರ್ವಜನಿಕರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಸಾಗರದಲ್ಲಿ ಬಸ್ ಹಾಗೂ ಕಾರು ನಡುವೆ ಅಪಘಾತ
ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ ಚರಂಡಿಗೆ ವಾಲಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಯಾವುದೇ ಗಂಭೀರ ಹಾನಿಯಾಗಿಲ್ಲ. ಸ್ಥಳಕ್ಕೆ ಬಂದ ERV ಸಿಬ್ಬಂದಿಗಳು ಸಂಚಾರಕ್ಕೆ ಅಡಚಣೆಯಾಗದಂತೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

