ಸಾಲಭಾದೆಯಿಂದ ಲಾರಿ ಮಾಲೀಕರೊಬ್ಬರು ಆತ್ಯಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (42) ಮೃತ ವ್ಯಕ್ತಿಯಾಗಿದ್ದಾರೆ.
ಮಂಜುನಾಥ್ ಫೈನಾನ್ಸ್ ಸೇರಿದಂತೆ ಇನ್ನಿತರೇ ಸಂಸ್ಥೆಗಳಿಂದ ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 10 ದಿನಗಳ ಹಿಂದೆ ಕುರುವಳ್ಳಿ ನಿವಾಸಿ ಮಂಜುನಾಥ್ ಎಂಬುವವರು ಸಹ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.