Car accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತ, ಚಾಲಕನಿಗೆ ಗಾಯ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಆನಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಕಾರು ರಸ್ತೆಯ ಬದಿಗೆ ಉರುಳಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಇಆರ್‌ವಿ (Emergency Response Vehicle) ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕನನ್ನು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.