Meat Ban ಶಿವಮೊಗ್ಗ ನಗರದಲ್ಲಿ ಆ.27 ರಂದು ಮಾಂಸ ಮಾರಾಟ ನಿಷೇಧ
ಶಿವಮೊಗ್ಗ, ಆಗಸ್ಟ್ 25 ಮಲೆನಾಡುಟುಡೆ ನ್ಯೂಸ್: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಗಸ್ಟ್ 27 ರಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಲಾಗಿದೆ.

ಮಾಂಸ ಮಾರಾಟ ನಿಷೇಧ
ಪ್ರಕಟಣೆಯಲ್ಲಿ, ನಗರದ ಎಲ್ಲಾ ಮಾಂಸ ಮಾರಾಟದ ಮಳಿಗೆಗಳು, ಪ್ರಾಣಿವಧೆ ಮಾಡುವ ಘಟಕಗಳು ಮತ್ತು ಸಂಬಂಧಿತ ವ್ಯಾಪಾರಗಳು ಆ.27 ರಂದು ಸಂಪೂರ್ಣವಾಗಿ ಸ್ಥಗಿತಗೊಳ್ಳಬೇಕು. ಈ ಕುರಿತು ಸಾರ್ವಜನಿಕರ ಸಹಕಾರ ಕೋರಿರುವ ಆಯುಕ್ತರು, ಆದೇಶವನ್ನು ಉಲ್ಲಂಘಿಸಿ ವ್ಯಾಪಾರ ನಡೆಸುವ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ನಿರ್ಧಾರವು ಹಬ್ಬದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ.