Traffic Diversion ಸೆಪ್ಟೆಂಬರ್ 6, 2025 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಕುರಿತು ಪೊಲೀಸ್ ಅಧೀಕ್ಷಕರು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.
ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್. ಸರ್ಕಲ್, ಎ.ಎ. ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ ಸರ್ಕಲ್, ಡಿ.ವಿ.ಎಸ್. ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಬಳಿ ಇರುವ ತುಂಗಾ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.
Traffic Diversion ಸಂಚಾರ ನಿಷೇಧ ಮತ್ತು ಮಾರ್ಗ ಬದಲಾವಣೆ ವಿವರಗಳು:
ಮೆರವಣಿಗೆ ಮಾರ್ಗ ಮತ್ತು ಅದರ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬೆಂಗಳೂರು, ಭದ್ರಾವತಿ, ಎನ್.ಆರ್. ಪುರ ಮತ್ತು ಚಿತ್ರದುರ್ಗ-ಹೊಳೆಹೊನ್ನೂರಿನಿಂದ ಬರುವ ಎಲ್ಲಾ ಭಾರಿ ವಾಹನಗಳು, ಬಸ್ಸುಗಳು ಮತ್ತು ಕಾರುಗಳು ಎಂ.ಆರ್.ಎಸ್. ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.
ಹೊನ್ನಾಳಿ, ಹರಿಹರ ಮತ್ತು ದಾವಣಗೆರೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್ಸುಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮೂಲಕ ಹೋಗಬೇಕು.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಕಡೆಗೆ ಹೋಗುವ ಬಸ್ಸುಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ, ಹೆಲಿಪ್ಯಾಡ್ ಸರ್ಕಲ್, ಅಯ್ಯೋಳ ಸರ್ಕಲ್, ಪೊಲೀಸ್ ಚೌಕಿ, ರಾಜ್‌ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮಾರ್ಗವಾಗಿ ಸವಳಂಗ ರಸ್ತೆ ಮೂಲಕ ಸಂಚರಿಸಬೇಕು.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಮತ್ತು ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ, ಎಂ.ಆರ್.ಎಸ್. ಸರ್ಕಲ್ ಮೂಲಕ ಹೋಗಬೇಕು.
ಶಿಕಾರಿಪುರ, ಸೊರಬ ಮತ್ತು ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೋಗುವ ಬಸ್ಸುಗಳು ಹಾಗೂ ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಮ್ ಸರ್ಕಲ್, ಲಕ್ಷ್ಮಿ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ, ಅಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸಬೇಕು.
ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
Traffic Diversion ಪೊಲೀಸ್ ವಾಹನಗಳು, ವಿಐಪಿ ವಾಹನಗಳು, ಆಂಬುಲೆನ್ಸ್ ಮತ್ತು ಮೂಲಭೂತ ಸೌಕರ್ಯ ಒದಗಿಸುವ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.