ಆಗಸ್ಟ್ 27, 2025, ಬೆಂಗಳೂರು, ಮಲೆನಾಡುಟುಡೆ ನ್ಯೂಸ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ವತಿಯಿಂದ ಆಗಸ್ಟ್ 29 ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.ಈ ಬಗ್ಗೆ ಪ್ರಕಟಣೆಯನ್ನು ನೀಡಲಾಗಿದೆ. ಪ್ರಕಟಣೆಯ ವಿವರದಲ್ಲಿ ಆಗಸ್ಟ್ 29 ರ ಬೆಳಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕಂಪನಿಗಳಿಂದ ನೇರ ಸಂದರ್ಶನ ನಡೆಯಲಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ
ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನೂ ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ (ಸ್ವವಿವರ) ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತರಬೇಕು ಎಂದು ಸೂಚಿಸಲಾಗಿದೆ.
ಅಂತಿಮವಾಗಿ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗವನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ 08182-255293 ಅಥವಾ 9380663606 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..

