Mahanagara palike : ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಕೂಡಲೇ ಸರ್ಕಾರ ಮಹಾನಗರ ಪಾಲಿಕೆಯ ಚುನಾವಣೆಯನ್ನು ನಡೆಸಬೇಕು ಎಂದು ಮಾಜಿ ಪಾಲಿಕೆ ಸದಸ್ಯ ಈ ವಿಶ್ವಾಸ್ ಒತ್ತಾಯಿಸಿದ್ದಾರೆ.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದಕ್ಕೆ ಸಾಕ್ಷಿಯಾಗಿ ನಿನ್ನೆ ಒಬ್ಬ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಈ ಕುರಿತು ನಮ್ಮ ರಾಷ್ಟ್ರ ಭಕ್ತ ಬಳಗ ಈ ಹಿಂದೆ ಸಾಕಷ್ಟು ಹೋರಾಟಗಳನ್ನು ಮಾಡಿತ್ತು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಹಾಗಾಗಿ, ಪಾಲಿಕೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿದಿನ ಪಾಲಿಕೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು. ಹಾಗೆಯೇ ಕಳೆದ 2 ವರ್ಷಗಳಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಯದ ಕಾರಣ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳು ಸ್ವಇಚ್ಛೆಯಿಂದ ವರ್ತಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರ ಕೂಡಲೇ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಇದಲ್ಲದೆ, ಇ-ಖಾತಾ ಜಾರಿಯಾದ ನಂತರ ಭ್ರಷ್ಟಾಚಾರ ಹೆಚ್ಚಾಗಿದ್ದು, ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಹೀಗೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಷ್ಟ್ರ ಭಕ್ತ ಬಳಗವು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಿದೆ ಎಂದು ಅವರು ಎಚ್ಚರಿಕೆ ನೀಡಿದರು.
Mahanagara palike ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಎಚ್ಚರಿಕೆ
ಇದೇ ಸಂದರ್ಭದಲ್ಲಿ, ರಾಷ್ಟ್ರ ಭಕ್ತ ಬಳಗದ ಸದಸ್ಯ ವಾಗೀಶ್ ಅವರು ಪಾಲಿಕೆ ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದ ಕುರಿತು ತೀರ್ಮಾನ ಕೈಗೊಳ್ಳಲು ಹೈಕೋರ್ಟ್ 8 ವಾರಗಳ ಗಡುವು ನೀಡಿತ್ತು. ಆದರೆ, ಈ ಗಡುವು ಮುಗಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗೆ ಮುಂದುವರೆದರೆ ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿ ಪ್ರತಿಭಟನೆ ನಡೆಸುವುದಾಗಿ ವಾಗೀಶ್ ತಚ್ಚರಿಸಿದರು.