By vijayendra : ಶಿವಮೊಗ್ಗ: ಕೇಂದ್ರ ಸರ್ಕಾರವು ಜಿಎಸ್‌ಟಿ ತೆರಿಗೆ ದರವನ್ನು ಎರಡು ಸ್ಲ್ಯಾಬ್‌ಗಳಿಗೆ ಇಳಿಸಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ. ಆದರೆ, ರಾಜ್ಯ ಸರ್ಕಾರವು ಇದರಿಂದ ರಾಜ್ಯಕ್ಕೆ ರೂ. 14,000 ಕೋಟಿ ನಷ್ಟವಾಗಲಿದೆ ಎಂದು ಹೇಳುವುದನ್ನು ನಿಲ್ಲಿಸಿ, ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜಿಎಸ್‌ಟಿ ಕುರಿತ ನಿರ್ಧಾರವು ದೇಶದ ಜನರಿಗೆ ದೀಪಾವಳಿ ಉಡುಗೊರೆ. ಜಿಎಸ್‌ಟಿ ಕಡಿತದಿಂದ ಅಗತ್ಯ ವಸ್ತುಗಳ ಬೆಲೆ ಇಳಿಯಲು ಸಹಾಯವಾಗಲಿದ್ದು, ಇದು ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಶಕ್ತಿಯನ್ನು ತುಂಬಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲ ಮಾಡಿಕೊಡಲಿದೆ ಎಂದರು.
By vijayendra ಕೇಂದ್ರದ ಈ ನಿರ್ಧಾರವು 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವ ಗುರಿಗೆ ಪ್ರಮುಖ ಹೆಜ್ಜೆಯಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತವು ವಿಶ್ವದ ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಏರಿದ್ದು, ಮುಂದಿನ ಕೆಲವೇ ವರ್ಷಗಳಲ್ಲಿ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಜಿಎಸ್‌ಟಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕನಸಿನ ಕೂಸು. ಅದನ್ನು ನನಸು ಮಾಡಿದ್ದು ನರೇಂದ್ರ ಮೋದಿ ಸರ್ಕಾರ. ಇದರಲ್ಲಿ ಯಾವುದೇ ರಾಜಕೀಯ ದುರಾಲೋಚನೆ ಇಲ್ಲ. ಜಿಎಸ್‌ಟಿ ಇಳಿಕೆಯಿಂದ ರಾಜ್ಯಕ್ಕೆ ರೂ. 14,000 ಕೋಟಿ ನಷ್ಟವಾಗುತ್ತದೆ ಎಂದು ಟೀಕಿಸುವುದನ್ನು ಬಿಟ್ಟು ರಾಜ್ಯದ ಆರ್ಥಿಕತೆಯನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಡೆಯನ್ನು ಶ್ಲಾಘಿಸಿದ ವಿಜಯೇಂದ್ರ, ದೇಶದ ಹಿತಾಸಕ್ತಿ ಬಂದಾಗ ಯಾವ ರೀತಿ ನಿಲ್ಲಬೇಕು ಎಂಬುದಕ್ಕೆ ದೇವೇಗೌಡರು ಉತ್ತಮ ಆದರ್ಶ ಹಾಕಿಕೊಟ್ಟಿದ್ದಾರೆ ಎಂದು ಹೇಳಿದರು. ಇತ್ತೀಚೆಗೆ ನಡೆದ ಶೃಂಗಸಭೆಯ ಬಗ್ಗೆ ಇಡೀ ವಿಶ್ವದಲ್ಲಿ ಚರ್ಚೆಯಾಗುತ್ತಿದ್ದು, ದೇಶದ ವಿಚಾರದಲ್ಲಿ ದೇವೇಗೌಡರು ಪ್ರದರ್ಶಿಸಿದ ನಡೆ ಎಲ್ಲರಿಗೂ ಉತ್ತಮ ಮೇಲ್ಪಂಕ್ತಿ. ಮುಂದಿನ ವಾರ ಪಕ್ಷದ ಮುಖಂಡರೊಂದಿಗೆ ದೇವೇಗೌಡರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.
By vijayendra ಧರ್ಮಸ್ಥಳ ಚಲೋ ಯಶಸ್ವಿ
ಧರ್ಮಸ್ಥಳ ಚಲೋದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿ ಹೋರಾಟ ಯಶಸ್ವಿಯಾಗಿದೆ. ಈ ಹಿಂದೆ ಮುಖ್ಯಮಂತ್ರಿಗಳು “ಬಿಜೆಪಿಯವರು ವೀರೇಂದ್ರ ಹೆಗ್ಗಡೆಯವರ ಪರವಾಗಿದ್ದಾರಾ ಅಥವಾ ಸೌಜನ್ಯ ಪರವಾಗಿದ್ದಾರಾ” ಕೇಳಿದ್ದರು. ಸಿದ್ದರಾಮಯ್ಯರವರೇ ನಾನು ಕೋಟ್ಯಾಂತರ ಮಂಜುನಾಥನ ಭಕ್ತರ ಪರ ನೀವು ಧರ್ಮಸ್ಥಳ ಭಕ್ತರ ಭಾವನೆಗಳಿಗೆ ಧಕ್ಕೆ ತರಬೇಡಿ. ನಿಮ್ಮಲ್ಲಿ ಪ್ರಾಮಾಣಿಕತೆ ಇದ್ದರೆ, ಎಂಡಿ ಸಮೀರ್‌ನನ್ನು ಮೊದಲು ಬಂಧಿಸಿ. ಸೋನಿಯಾ ಗಾಂಧಿ ಬಗ್ಗೆ ಒಂದು ಪೋಸ್ಟ್ ಹಾಕಿದರೆ ಬಂಧಿಸುತ್ತೀರಿ, ಆದರೆ ಸಮೀರ್‌ನನ್ನು ಯಾಕೆ ಬಂಧಿಸುತ್ತಿಲ್ಲ?” ಎಂದು ಪ್ರಶ್ನಿಸಿದರು.
By vijayendra ಭಾನು ಮುಸ್ತಾಕ್ ಮತ್ತು ದಸರಾ ವಿವಾದ
ಭಾನು ಮುಸ್ತಾಕ್ ಅರಿಶಿನ ಕುಂಕುಮ ಹಚ್ಚಿಕೊಂಡು ಬರಬೇಕೆಂಬ ವಾದದ ಬಗ್ಗೆ ಸಿಎಂ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ದೀಪಾ ಬಸ್ತಿಯವರಿಗೂ ಬೂಕರ್ ಪ್ರಶಸ್ತಿ ಬಂದಿದೆ. ಮುಸ್ತಾಕ್‌ರನ್ನು ಉದ್ಘಾಟನೆಗೆ ಕರೆಯಲು ಯೋಚಿಸಿದವರಿಗೆ ದೀಪಾ ಬಸ್ತಿ ಯಾಕೆ ಕಾಣಲಿಲ್ಲ?” ಎಂದು ಪ್ರಶ್ನಿಸಿದರು. ಹಾಗೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂದು ನೀಡಿದ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಡಿಸಿಎಂ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಖಂಡಿಸಿದರು.