ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ”: ಶಾಸಕ ಬಿ.ಕೆ. ಸಂಗಮೇಶ್ವರ್ 

ಹಂಚಿಕೊಳ್ಳಿ
WhatsApp Facebook X Telegram
Bhadravathi MLA retires Bk sangameshwar
Bhadravathi MLA retires Bk sangameshwar

Bk sangameshwar : ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಮುಸ್ಲಿಂ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ” ಎಂದಿದ್ದಾರೆ.

ಸೋಮವಾರ ಸಂಜೆ ಭದ್ರಾವತಿಯ ಹೊಳೆಹೊನ್ನೂರು ಸರ್ಕಲ್ ಬಳಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ.ಬಿ.ಟಿ. ಬಾಬು ನೇತೃತ್ವದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡುತ್ತಿದ್ದಾಗ ಶಾಸಕರು ಈ ಹೇಳಿಕೆ ನೀಡಿದ್ದಾರೆ.

ಸಂಗಮೇಶ್ವರ್ ಅವರು ತಮ್ಮ ಭಾಷಣದಲ್ಲಿ, 20 ವರ್ಷಗಳ ಹಿಂದೆ ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ರದ್ದಾಗಿದ್ದ ಈದ್ ಮಿಲಾದ್ ಮೆರವಣಿಗೆಯನ್ನು ಮತ್ತೆ ಪ್ರಾರಂಭಿಸಿದರು.”ಅಲ್ಲಿಂದ ಇಲ್ಲಿಯವರೆಗೆ ಪ್ರತಿ ವರ್ಷವೂ ಶಾಂತ ರೀತಿಯಲ್ಲಿ ಮೆರವಣಿಗೆ ಮಾಡಿ ನಮ್ಮ ಗೌರವವನ್ನು ಉಳಿಸಿರುವ ನಿಮಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲರೂ ಸೋದರ ಭಾವನೆಯಿಂದ ಬದುಕು ನಡೆಸೋಣ. ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿದರೆ ಅಲ್ಲಾಹು ಎಲ್ಲರಿಗೂ ಒಳಿತು ಮಾಡುತ್ತಾನೆ” ಎಂದು ಹೇಳಿದರು.

Bk sangameshwar

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor