Dasara Sports : ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಜುಡೋ, ಯೋಗ, ಬ್ಯಾಡ್ಮಿಂಟನ್, ಈಜು, ಟೆನ್ನಿಸ್ ಮತ್ತು ಹಾಕಿ ಸ್ಪರ್ಧೆಗಳು ನಡೆಯಲಿವೆ. (Organized)
ಈ ಕ್ರೀಡಾ ಮಹೋತ್ಸವದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. (Inauguration)
ಭದ್ರಾವತಿ ಶಾಸಕ ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ, ಹಾಗೂ ಸಾಗರ ಕ್ಷೇತ್ರದ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿವಿಧ ಮಂಡಳಿಗಳ ಅಧ್ಯಕ್ಷರು, ಹಾಗೂ ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.