ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ. ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು.
ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ ಅಥವಾ ಅಕ್ರಮ ಆಸ್ತಿ ಸಂಪಾದನೆಗಳಂತಹ ಯಾವುದೇ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಲಿಖಿತವಾಗಿ ಸಲ್ಲಿಸಲು ಅವಕಾಶವಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
Lokayukta to Hold Public Grievance Meeting in Sagar on Sep 19
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
