ಶಿವಮೂರ್ತಿ ಸರ್ಕಲ್​ನಲ್ಲಿ ಶವಯಾತ್ರೆ : ಕಾರಣವೇನು

prathapa thirthahalli
Prathapa thirthahalli - content producer

Protest in shivamogga :  ಶಿವಮೊಗ್ಗ : ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಹಲವು ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಭಾಗವಾಗಿ ಬಂಜಾರ ಸಮುದಾಯವು ಸಹ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸೆಪ್ಟೆಂಬರ್ 12 ರಿಂದ ಆರಂಭವಾದ ಈ ಪ್ರತಿಭಟನೆಯು ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಬಂಜಾರ ಸಮುದಾಯದವರು ಶಿವಮೂರ್ತಿ ಸರ್ಕಲ್‌ನಲ್ಲಿ ಅಣಕು ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಶಿವಮೂರ್ತಿ ವೃತ್ತದಲ್ಲಿ ಟ್ರಾಕ್ಟರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಡೆಸಿದರು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ ಮತ್ತು ಜಯನಗರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನಗಳು ಸಾಲುಗಟ್ಟಿ ನಿಂತವು. ನಂತರ ಪ್ರತಿಭಟನಾಕಾರರು ಅಣಕು ಶವದೊಂದಿಗೆ ಜಿಲ್ಲಾಧಿಕಾರಿ ಕಚೇರಿಯತ್ತ ಶವಯಾತ್ರೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಶಾಸಕ ಅಶೋಕ್ ನಾಯ್ಕ್,  ಸಿದ್ದರಾಮಯ್ಯರವರು  ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಈ ಒಳಮೀಸಲಾತಿಯಿಂದ ಮೀಸಲಾತಿಯ ಮೂಲ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ನಾವು ಮೀಸಲಾತಿಯ ಶವಯಾತ್ರೆ ನಡೆಸುತ್ತಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Protest in shivamogga

Malenadu Today

Share This Article