ಒಂದೆ ದಿನ ಹಲವೆಡೆ ರೇಡ್! 33 ಕೇಸ್​ ದಾಖಲು

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 19 2025 :   ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ  ಹಲವು ಅಂಗಡಿಗಳ ಮೇಲೆ ತಂಬಾಕು ನಿಯಂತ್ರಣ ಕೋಶಾಧಿಕಾರಿಗಳು ನಿನ್ನೆದಿನ ಬುಧವಾರ ದಾಳಿ ನಡೆಸಿದ್ದಾರೆ. ಈ ವೇಳೆ  7060 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.  

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಈ ದಾಳಿ ಕೈಗೊಂಡಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಒಟ್ಟು 33 ಪ್ರಕರಣಗಳನ್ನು ದಾಖಲಿಸಿಕೊಂಡು 7060 ರೂ. ದಂಡ ವಿಧಿಸಿದ್ದಾರೆ. 

Tobacco Control Officials Raid Shops in Soraba
Tobacco Control Officials Raid Shops in Soraba

ಜಿಲ್ಲಾ ತಂಬಾಕು ನಿಯಂತ್ರಣ ಕೋಶಾಧಿಕಾರಿ ರವಿರಾಜ್, ಸಾಮಾಜಿಕ ಕಾರ್ಯಕರ್ತ ಹೇಮಂತ್ ರಾಜ್ ಅರಸ್, ತಾಲೂಕು ಆರೋಗ್ಯಾಧಿಕಾರಿ ಡಾ.ನೂತನ್ ನಾಯಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ ಕುಲಕರ್ಣಿ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಯಶವಂತರಾಜ್, ಶಬೀರ್ ಖಾನ್ ಮತ್ತಿತರರು ದಾಳಿಯಲ್ಲಿ ಪಾಲ್ಗೊಂಡಿದ್ದರು. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Tobacco Control Officials Raid Shops in Soraba

Maruti Suzuki Slashes Prices
Maruti Suzuki Slashes Prices
Share This Article