Shivamogga dasara : ಶಿವಮೊಗ್ಗ : ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ದಸರಾ ಮಹೋತ್ಸವಕ್ಕೆ ಕನ್ನಡ ಚಲನಚಿತ್ರರಂಗದ ಹಲವು ಖ್ಯಾತ ನಟ-ನಟಿಯರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 24ರಿಂದ ಮೂರು ದಿನಗಳ ಕಾಲ ಚಲನಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಸೆಪ್ಟೆಂಬರ್ 24ರಂದು ನಡೆಯಲಿರುವ ಚಲನಚಿತ್ರ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟ ಶರಣ್ ನಟಿ ಕಾರುಣ್ಯ ರಾಮ್ ನಿರ್ದೇಶಕ ಸಾಯಿ ಪ್ರಕಾಶ್ ಹಾಗೂ ನಟಿ ಮತ್ತು ನಿರ್ದೇಶಕಿ ರೂಪಾ ಅಯ್ಯರ್ (Roopa Iyer) ಭಾಗವಹಿಸಲಿದ್ದಾರೆ.
ಈ ಬಾರಿ ಚಲನಚಿತ್ರ ದಸರಾದಲ್ಲಿ ಮೂರು ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ. ಸೆಪ್ಟೆಂಬರ್ 25ರಂದು ಬೆಳಿಗ್ಗೆ 9:30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ತಲೆದಂಡ’ ಸಿನಿಮಾ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 26ರಂದು ಬೆಳಿಗ್ಗೆ 9:30ಕ್ಕೆ ‘ಜೀನಿಯಸ್ ಮುತ್ತ’ ಹಾಗೂ ಸೆಪ್ಟೆಂಬರ್ 27ರಂದು ಬೆಳಿಗ್ಗೆ 9:30ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ಗರುಡ ಗಮನ ವೃಷಭ ವಾಹನ’ ಚಿತ್ರಗಳನ್ನು ಪ್ರದರ್ಶಿಸಲಾಗುವುದು.
ಇದಲ್ಲದೆ, ಇತರ ನಟರು ಮತ್ತು ಕಲಾವಿದರು ಕೂಡ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 26ರಂದು ನಡೆಯುವ ನಗೆ ಹಬ್ಬದಲ್ಲಿ ನಟ ಮುಖ್ಯಮಂತ್ರಿ ಚಂದ್ರು (ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 28ರಂದು ನಡೆಯಲಿರುವ ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕರಾದ ಹೇಮಂತ್ ಕುಮಾರ್ ಅನುರಾಧ ಭಟ್ ಸರಿಗಮಪತಂಡ ಹಾಗೂ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಕಲಾವಿದರು ಕೂಡ ಇರಲಿದ್ದಾರೆ.
ಸೆಪ್ಟೆಂಬರ್ 30ರಂದು ನಟಿ ಗೀತಾ ಅವರು ಕಾರ್ಯಕ್ರಮವೊಂದನ್ನು ಉದ್ಘಾಟಿಸಲಿದ್ದು, ಅಕ್ಟೋಬರ್ 1ರಂದು ನಟಿ ಹರ್ಷಿಕಾ ಪೂಣಚ್ಚ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
