ಟೈರ್​ಗೆ ಬೆಂಕಿ, ಸಿಎಂ ವಿರುದ್ಧ ಆಕ್ರೋಶ! ಶಿವಮೊಗ್ಗದಲ್ಲಿ ಒಳಮೀಸಲಾತಿ ಪ್ರತಿಭಟನೆ ! ಏನೆಲ್ಲಾ ನಡೆಯಿತು!

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 :  ಶಿವಮೊಗ್ಗದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ಮುಂದುವರಿದಿದೆ. ಈ ಸಂಬಂಧ ಇವತ್ತು ಕೂಡ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯವರೆಗೂ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರಿಗೆ ಮನವಿ ಸಲ್ಲಿಸಿದರು. 

Massive Protest in Shivamogga Against Unscientific Internal Reservation
Massive Protest in Shivamogga Against Unscientific Internal Reservation

ಸರ್ಕಾರದ ಅವೈಜ್ಞಾನಿಕ ಒಳ ಮೀಸಲಾತಿ ವರ್ಗೀಕರಣ ನೀತಿಯನ್ನು ವಿರೋಧಿಸಿ ಆಕ್ರೋಶವನ್ನು ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ  ಶಿವಮೊಗ್ಗ ಜಿಲ್ಲೆಯ 181 ತಾಂಡಗಳಿಂದ ಆಗಮಿಸಿದ್ದ ಜನರು ಪಾಲ್ಗೊಂಡಿದ್ದರು. 

ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ ಮತ್ತು ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ  ನಡೆದ ಧರಣಿಯಲ್ಲಿ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಡಿಸಿ ಕಚೇರಿಯವರೆಗೆ ಬೃಹತ್ ರ್ಯಾಲಿಯನ್ನು ಕೈಗೊಳ್ಳಲಾಗಿತ್ತು.

Massive Protest in Shivamogga Against Unscientific Internal Reservation
Massive Protest in Shivamogga Against Unscientific Internal Reservation

ಈ ವೇಳೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಒಳಮೀಸಲಾತಿಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಅವೈಜ್ಞಾನಿಕ ಒಳ ಮೀಸಲಾತಿ ಜಾರಿಗೆ ತರಬಾರದೆಂದು ಅವರು ಆಗ್ರಹಿಸಿದರು. ಮೀಸಲಾತಿಯನ್ನು ವೈಜ್ಞಾನಿಕ ಸಮೀಕ್ಷೆ ನಡೆಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. 

ಈ ಹೋರಾಟದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ, ಮಾಜಿ ಶಾಸಕ ಪಿ. ರಾಜೀವ್ ಮತ್ತು ಕೆ.ಬಿ. ಅಶೋಕ್ ನಾಯ್ಕ ಅವರು ಕೂಡ ಭಾಗವಹಿಸಿದ್ದರು. ಈ ನಾಯಕರು ಸಮುದಾಯದ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರದ ನೀತಿಯ ವಿರುದ್ಧ ಧ್ವನಿ ಎತ್ತಿದರು

Massive Protest in Shivamogga Against Unscientific Internal Reservation
Massive Protest in Shivamogga Against Unscientific Internal Reservation

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Massive Protest in Shivamogga Against Unscientific Internal Reservation
Massive Protest in Shivamogga Against Unscientific Internal Reservation

Share This Article