ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಶಿವಮೊಗ್ಗ ಬಿಜೆಪಿ ಮುಖಂಡರು ಇವತ್ತು ನಗರದ ಅಶೊಕ ಸರ್ಕಲ್ನಲ್ಲ ರಸ್ತೆ ತಡೆ ನಡೆಸಿದ್ದಷ್ಟೆ ಅಲ್ಲದೆ,ವಾಹನಗಳ ತಡೆದು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚದ ಮತ್ತು ಅಭಿವೃದ್ಧಿ ನಿರ್ಲಕ್ಷಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಶಿವಮೊಗ್ಗದಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
ಪ್ರತಿಭಟನಾಕಾರರು ‘ಕಾಂಗ್ರೆಸ್ ಸರ್ಕಾರ ಜನರಿಗೆ ಸಂಚಕಾರ’ ಮತ್ತು ‘ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದರು. ಅಲ್ಲದೆ, ‘ಖಾಲಿ, ಖಾಲಿ ಖಜಾನೆ ಖಾಲಿ’ ಎಂದು ಸರ್ಕಾರದ ಆರ್ಥಿಕ ನಿರ್ವಹಣೆಯ ಬಗ್ಗೆಯೂ ಟೀಕಿಸಿದರು.
ಅಂತಿಮವಾಗಿ ರಾಜ್ಯದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಬಿಜೆಪಿ ನಾಯಕರು ಆಗ್ರಹಿಸಿದರು. ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಮೊಳಗಿಸಿದರು.
ಇನ್ನೂ ಬಿಜೆಪಿಯ ಪ್ರತಿಭಟನೆಯಿಂದಾಗಿ ಅಶೋಕ ಸರ್ಕಲ್ನಲ್ಲಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಬಸ್ಸ್ಟಾಂಡ್ ಸರ್ಕಲ್ ಸಂಪರ್ಕಿಸುವ ದಾರಿಗಳನ್ನು ಬಂದ್ ಮಾಡಿ ವಾಹನಗಳನ್ನು ಡೈವರ್ಟ್ ಮಾಡಲಾಗಿತ್ತು. ಇದರ ನಡುವೆಯು ಹಲವು ವಾಹನಗಳ ಸಂಚಾರಕ್ಕೆ ಪ್ರತಿಭಟನೆಯಿಂದ ಅಡ್ಡಿಯುಂಟಾಗಿತ್ತು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!




BJP staged a protest in Shivamogga, blocking roads and raising slogans against the state Congress government for its alleged failure to fix potholes