ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್​ ತರಬೇತಿ : ಎಲ್ಲಿ ಯಾವಾಗ

ಹಂಚಿಕೊಳ್ಳಿ
WhatsApp Facebook X Telegram
ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್​ ತರಬೇತಿ : ಎಲ್ಲಿ ಯಾವಾಗ

ಶಿವಮೊಗ್ಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ  ಅಕ್ಟೋಬರ್​ 6 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆಪ್ಟೆಂಬರ್​  30 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳನ್ನು ಸಂಪರ್ಕಿಸಿ. 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor