ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 26 2025 : ಶಿವಮೊಗ್ಗದಲ್ಲಿ ಪದವಿ ಕಾಲೇಜುಗಳಿಗೆ (Immediate) ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಮಧ್ಯೆ ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಜಿಲ್ಲಾಡಳಿತದ ಬೇರೆ ಅಧಿಕಾರಿಗಳು ಬಂದಾಗ, ಸ್ಥಳಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರೇ ಬರಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಇವರನ್ನ ತಡೆಯಲು ಮುಂದಾದ ಪೊಲೀಸರ ಜೊತೆಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದರು. ‘
ಅಲ್ಲದೆ ಜಿಲ್ಲಾಧಿಕಾರಿಗಳು ಬರುವವರೆಗೂ ನಾವು ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಪಟ್ಟು ಹಿಡಿದರು. ಈ ನಡುವೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವಿಯನ್ನು ಆಲಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಸ್ಥಳಕ್ಕೆ ದೌಡಾಯಿಸಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಮುಂದಾದರು. ಆದರೂ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮುಂದುವರಿಸಿದರು.
ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ






ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
ABVP Students Protest in Shimoga for Immediate Appointment of Guest Lecturers
