ಸೊರಬ: ಸೊರಬ ತಾಲೂಕಿನ ಓಟೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತಾನು ಸಾಕಿದ್ದ ಕೋಣದ ತಿವಿತಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಮಂಜಪ್ಪ (60) ಮೃತಪಟ್ಟ ವ್ಯಕ್ತಿಯಾಗಿದ್ದು, ಅವರು ಎಂದಿನಂತೆ ತಮ್ಮ ಕೋಣವನ್ನು ಮೇಯಿಸಲು ಹೊಲದ ಕಡೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಕೋಣವು ಏಕಾಏಕಿ ತಿವಿದಿದ್ದು, ಪರಿಣಾಮವಾಗಿ ಮಂಜಪ್ಪ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
- Advertisement -
ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ

