ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : ದಸರಾ ಹಿನ್ನೆಲೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ನಾಳೆ ದಿನ ಅಂದರೆ ಮಂಗಳವಾರವೂ ತೆರೆದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಸರಾ ಹಬ್ಬದ ಕಾರಣ ಸಾರ್ವಜನಿಕರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೃಗಾಲಯವನ್ನು ಮತ್ತು ಸಫಾರಿ ವೀಕ್ಷಣೆಯನ್ನು ಮಂಗಳವಾರದಂದೂ ಸಹ ತೆರೆಯಲು ನಿರ್ಧರಿಸಲಾಗಿದೆ. Lion and Tiger Safari
ಸಾಮಾನ್ಯವಾಗಿ ವಾರದ ರಜೆ ಇರುವ ಮಂಗಳವಾರದಂದೂ ಸಹ ಸಾರ್ವಜನಿಕರಿಗೆ ಧಾಮದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ದಿನಾಂಕ: 30.09.2025 ಮತ್ತು 07.10.2025 ರಂದು ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ಲಭ್ಯವಿರುತ್ತದೆ.

ಪ್ರವಾಸಿಗರೆಲ್ಲರೂ ಈ ವಿಶೇಷ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಇದನ್ನು ಸಹ ಓದಿ ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
 