ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 30 2025 : ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ ಮುಂಧಾಗಿದೆ. ಈ ಸಂಬಂಧ ಈ ನಿಟ್ಟಿನಲ್ಲಿ ಸುತ್ತಮುತ್ತಲಿನ ಗ್ರಾಮಗಳನ್ನು ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಪ್ರಕ್ರಿಯೆಯನ್ನು ಜಿಲ್ಲಾಡಳಿತವು ಪ್ರಾರಂಭಿಸಿದೆ.
ತುಮಕೂರು ನಗರ ಪಾಲಿಕೆಗೆ ಒಟ್ಟು 14 ಗ್ರಾಮ ಪಂಚಾಯತ್‌ಗಳಿಗೆ ಸೇರಿದ 54 ಗ್ರಾಮಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಈ ಬಗ್ಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. ಇತ್ತ ಶಿವಮೊಗ್ಗ ನಗರ ಪಾಲಿಕೆಯ ವಿಸ್ತರಣೆಗೂ ಇದೇ ರೀತಿಯ ಪ್ರಯತ್ನಗಳು ನಡೆಯುತ್ತಿವೆ.
ಈ ಯೋಜನೆ ಅಡಿಯಲ್ಲಿ ನಗರದ ಸುತ್ತಮುತ್ತಲಿನ ಒಂಬತ್ತು ಗ್ರಾಮ ಪಂಚಾಯತ್‌ಗಳ 19 ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಲು ಸಿದ್ಧತೆ ನಡೆದಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಗ್ರಾಮದ ಗ್ರಾಮೀಣ ಸ್ವರೂಪವನ್ನು ಕಳೆದುಕೊಂಡಿರುವ, ಕೃಷಿಯೇತರ ಚಟುವಟಿಕೆಗಳು ಹಾಗೂ ಆದಾಯ ಉತ್ಪಾದನೆ (revenue generation) ಹೆಚ್ಚಿರುವ ಗ್ರಾಮಗಳನ್ನು ಪರಿಗಣಿಸಲು ಡಿಸಿ ಸೂಚನೆ ನೀಡಿದ್ದು, ಶೀಘ್ರದಲ್ಲೇ ಪ್ರಸ್ತಾವನೆಯನ್ನು ಅಂತಿಮಗೊಳಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


Karnataka Govt Plans Expansion of Tumakuru and Shivamogga City Corporation Boundaries
Tumakuru City Corporation expansion, Shivamogga Municipal Corporation boundary extension, Karnataka city corporation expansion news, Shivamogga city corporation property tax new limits, ಶಿವಮೊಗ್ಗ ಮಹಾನಗರ ಪಾಲಿಕೆ ಗಡಿ ವಿಸ್ತರಣೆ, ಕರ್ನಾಟಕ ಸರ್ಕಾರ ನಿರ್ಧಾರ, ಜಿ ಪರಮೇಶ್ವರ, 54 ಗ್ರಾಮಗಳ ಸೇರ್ಪಡೆ, 19 ಗ್ರಾಮಗಳ ವಿಲೀನ, ನಗರ ಅಭಿವೃದ್ಧಿ.
ಇದನ್ನು ಸಹ ಓದಿ ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!