SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS
SHIVAMOGGA | ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.02 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಪವರ್ ಕಟ್ (Power Cut) ಇರಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗದಲ್ಲಿ ಪವರ್ ಕಟ್
ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು,ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
READ : ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ
ಸಹಪಠ್ಯ ಚಟುವಟಿಕೆ ಸ್ಪರ್ಧೆ
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಡಿ. 02 ರಂದು ಬೆಳಗ್ಗೆ 10.30ಕ್ಕೆ ನಗರದ ಕೋಟೆ ರಸ್ತೆ ಮಹಾವೀರ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ್ಲಲಿ ಜನಪದ ಗೀತೆ, ಆಶುಭಾಷಣೆ, ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ ಮತ್ತು ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ 98 ಶಿಕ್ಷಕರು ಸ್ಪರ್ಧಿಸಲಿದ್ದಾರೆ.
ಅವಧಿ ವಿಸ್ತರಣೆ
ಶಿವಮೊಗ್ಗ, ಡಿಸೆಂಬರ್ 01, (ಕರ್ನಾಟಕ ವಾರ್ತೆ): ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳು 2023-24ನೇ ಸಾಲಿನಲ್ಲಿ ನೇರಸಾಲ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ. 15ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಫಲಾಪೇಕ್ಷಿಗಳು ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್, ಸೇವಾ ಸಿಂಧು ಪೋರ್ಟಲ್‍ನಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ಎ ಬ್ಲಾಕ್, ಶಿವಮೊಗ್ಗ, ದೂ.ಸಂ.: 08182-224349ನ್ನು ಸಂಪರ್ಕಿಸುವುದು.
