ಗ್ರಾಮಸ್ಥರು ಹಿಡಿದ ಆರೋಪಿಗಳನ್ನ ಬಿಟ್ಟು ಕಳಿಸಿದಕ್ಕೆ ಆಕ್ರೋಶ! ಡಿವೈಎಸ್​ಪಿ ಕಚೇರಿ ಎದುರು ಪ್ರತಿಭಟನೆ

SHIVAMOGGA |  Dec 11, 2023 ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನ ಜನರೇ ಹಿಡಿದುಕೊಟ್ಟರೂ ಒಂದೇ ದಿನದ ಆರೋಪಿಗಳನ್ನ ಬಿಟ್ಟು ಕಳಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. 

ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ವಾಹನ ಸಮೇತ ಆರೋಪಿಗಳನ್ನ ಇಲ್ಲಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆದರೆ ಪೊಲೀಸರು ಆರೋಪಿಗಳನ್ನ ಒಂದೇ ದಿನದಲ್ಲಿ ಬಿಟ್ಟು ಕಳುಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪ. ಅಲ್ಲದೆ ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಬಗ್ಗೆ ಡಿವೈಎಸ್​ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ ದೂರು ಸಲ್ಲಿಸಿದ್ದಾರೆ. 

READ : ಶಿವಮೊಗ್ಗ ಹಳೆಯ ರೈಲು ನಿಲ್ದಾಣದ ಬಳಿ ಹಳಿಯ ಮೇಲೆ ಅಪರಿಚಿತ ವ್ಯಕ್ತಿ ಸಾವು!

ಇನ್ನೂ ಈ ವೇಳೆ ಪ್ರತಿಕ್ರಿಯಿಸಿದ ಡಿವೈಎಸ್​ಪಿ ಗೋಪಾಲಕೃಷ್ಣ ನಾಯಕ್ ಗ್ರಾಮಸ್ಥರು ಹಿಡಿದುಕೊಟ್ಟ ಆರೋಪಿಗಳ ವಿರುದ್ಧ ಎಫ್​ಐಆರ್​ ಆಗಿದೆ ಕಳ್ಳತನ ಪ್ರಕರಣದ ತನಿಖೆ ನಡೆಯುತ್ತಿದೆ, ಆದಷ್ಟು ಬೇಗ ಕಳ್ಳರನ್ನ ಹಿಡಿಯುತ್ತೇವೆ ಎಂದಿದ್ದಾರೆ.  

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು