ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ದಳ ಕಚೇರಿ ಎದುರು ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಗ್ಯಾಸ್ ಲಾರಿಗೆ, ಭದ್ರಾವತಿ ಕಡೆಗೆ ಸಾಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಗಾಯಗೊಂಡ ವ್ಯಕ್ತಿಯನ್ನು ಉಜ್ಜಿನಿಪುರ ನಿವಾಸಿ ನರೇಶ್ ಎಂದು ಗುರುತಿಸಲಾಗಿದೆ. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -
ಘಟನಾ ಸ್ಥಳಕ್ಕೆ ಭದ್ರಾವತಿಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

