ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 27, 2025, ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರವರೆಗೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮಳೆ ಸುದ್ದಿ | ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್! ಮುಂದುವರಿಯಲಿದೆ ವರ್ಷಧಾರೆ
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಒಳಗೊಂಡು ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
ಅ.28 ಹಾಗೂ 29ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು ಆರೆಂಜ್ ಅಲರ್ಟ್ ಅನ್ನು ಸಹ ಘೋಷಿಸಲಾಗಿದೆ. ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಉಂಟಾಗಲಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 20 ಇರಲಿದೆ. ಅ.28ರವರೆಗೆ ತಮಿಳುನಾಡು, ಕೇರಳ ಮತ್ತು ಮಾಹೆಯ ಹಲವೆಡೆ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

