goods vehicle hit tree Chennagiri UP laborer die : ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025: ಶಿವಮೊಗ್ಗ ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ.

ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎಂದು ಗೊತ್ತಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ ( 50), ಸಾದಿಕ್ ( 30), ಮತ್ತು ಫಿರೋಜ್ ( 22) ಮೃತಪಟ್ಟಿದ್ದಾರೆ. ಮೃತರ ಪೈಕಿ ಅಸಾದುಲ್ಲಾ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದವರಾಗಿದ್ದು, ಸಾದಿಕ್ ಮತ್ತು ಫಿರೋಜ್ ಉತ್ತರ ಪ್ರದೇಶದ ಕಾರ್ಮಿಕರು ಎಂದು ತಿಳಿದು ಬಂದಿದೆ.

ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ
ಘಟನೆಯಲ್ಲಿ ಗೂಡ್ಸ್ ವಾಹನವು ಜಖಂಗೊಂಡಿದ್ದು, ಚಾಲಕ ಇಮ್ರಾನ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಘಟನೆ ಬೆನ್ನಲ್ಲೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಯಲ್ಲೋ ಅಲರ್ಟ್! ಹವಾಮಾನ ಇಲಾಖೆ
goods vehicle hit tree Chennagiri UP laborer die
Three people, including one from Chennagiri and two laborers from UP, died after an Ashok Leyland goods vehicle hit a tree near Gondhichatnahalli, Shivamogga. Driver absconds.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ! goods vehicle hit tree Chennagiri UP laborer die
