ಶಿವಮೊಗ್ಗ: ಹೆಂಡತಿ ಸಾವನ್ನಪ್ಪುತ್ತಿದ್ದಂತೆ ಆಸ್ಪತ್ರೆಯಲ್ಲಿ ಶವ ಬಿಟ್ಟು ಪರಾರಿಯಾದ ಪತಿ ಮತ್ತು ಕುಟುಂಬಸ್ಥರು : ಏನಿದು ಪ್ರಕರಣ

prathapa thirthahalli
Prathapa thirthahalli - content producer

Shivamogga ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪುತ್ತಿದ್ದಂತೆ, ಪತಿ ಹಾಗೂ ಆತನ ಕುಟುಂಬದವರು ಶವವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾದ ಅಮಾನವೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತರನ್ನು ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್‌ ಅವರ ಪತ್ನಿ ಪೂಜಾ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಶರತ್‌ ಜೊತೆ ಪೂಜಾಳ ವಿವಾಹವಾಗಿತ್ತು. ಮದುವೆಯಾದಾಗಿನಿಂದಲೂ ಪೂಜಾ ಅವರಿಗೆ ಗಂಡನ ಮನೆಯವರಿಂದ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ . ಈ ಬಗ್ಗೆ ಪೂಜಾ ತಮ್ಮ ತವರು ಮನೆಯವರ ಬಳಿಯೂ ಹೇಳಿಕೊಂಡಿದ್ದರು. ತವರು ಮನೆಯವರು ಸಮಾಧಾನ ಪಡಿಸಿದರೂ, ಕಿರುಕುಳ ದಿನೇ ದಿನೇ ಹೆಚ್ಚಾಗಿತ್ತು. ಕಿರುಕುಳದಿಂದ ಬೇಸತ್ತ ಪೂಜಾ ಅವರು ಇತ್ತೀಚೆಗೆ  ಕಳೆ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಸಾವನ್ನಪ್ಪಿದ್ದಾರೆ.

- Advertisement -

ಪೂಜಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶರತ್‌ ಹಾಗೂ ಆತನ ಕುಟುಂಬಸ್ಥರು ಆಸ್ಪತ್ರೆಯಲ್ಲಿಯೇ ಪೂಜಾಳ ಶವವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ದಂಪತಿಗೆ ಎರಡೂವರೆ ವರ್ಷದ ಪುತ್ರನಿದ್ದಾನೆ.

Shivamogga Woman Dies After Consuming Poison

Shivamogga

 

TAGGED:
Share This Article
Leave a Comment

Leave a Reply

Your email address will not be published. Required fields are marked *