Child Trafficking Punishment :ಶಿವಮೊಗ್ಗ: ಮಕ್ಕಳ ಮಾರಾಟ ಮತ್ತು ಖರೀದಿ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಬಾಲ ನ್ಯಾಯ ಕಾಯ್ದೆ – 2015 ರ ಅಡಿಯಲ್ಲಿ ಕಠಿಣ ಸೆರೆಮನೆ ವಾಸ ಮತ್ತು ಭಾರೀ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಎಚ್ಚರಿಕೆ ನೀಡಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಮಕ್ಕಳನ್ನು ಮಾರಾಟ ಮಾಡುವವರು ಮತ್ತು ಅವರನ್ನು ಕೊಳ್ಳುವವರು ಇಬ್ಬರಿಗೂ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರ ಅಡಿಯಲ್ಲಿ ಐದು ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ ಒಂದು ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಅಪರಾಧ ಕೃತ್ಯದಲ್ಲಿ ಆಸ್ಪತ್ರೆಯ ಸಿಬ್ಬಂದಿ ಅಥವಾ ಸಂಬಂಧಿತ ಸಂಸ್ಥೆಗಳು ಶಾಮೀಲಾದಲ್ಲಿ, ಅವರಿಗೆ ನೀಡುವ ಶಿಕ್ಷೆಯ ಅವಧಿಯು ಮೂರು ವರ್ಷಗಳಿಂದ ಏಳು ವರ್ಷಗಳವರೆಗೆ ವಿಸ್ತರಿಸಲಾಗುತ್ತದೆ.
https://malenadutoday.com/annamalai-makes-hasty-visit-to-shivamogga/
ಸಾರ್ವಜನಿಕ ಸ್ಥಳಗಳಲ್ಲಿ ಅನಾಥರಾದ, ಪರಿತ್ಯಕ್ತರಾದ ಅಥವಾ ಒಪ್ಪಿಸಲ್ಪಟ್ಟ ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಅದನ್ನು ತಕ್ಷಣವೇ ಸಂಬಂಧಪಟ್ಟ ಘಟಕಕ್ಕೆ ತಲುಪಿಸುವಂತೆ ಮನವಿ ಮಾಡಲಾಗಿದೆ. ಅಂತಹ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ (ದೂ.ಸಂ.: 08182-295709) ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

