ನವೆಂಬರ್, 05, 2025 ರ ಮಲೆನಾಡು ಟುಡೆ ಸುದ್ದಿ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ನವೆಂಬರ್ 9ರಂದು ಸಾಗರ ನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಲೆನಾಡು ಲೋಹಿಯಾ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷರಾದ ಸಂತೋಷ್ ಸದ್ಗುರು ಅವರು ತಿಳಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಮತ್ತು ಸುದೀರ್ಘ ರಾಜಕೀಯದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ತಮ್ಮ ಸಂಘಟನೆಯಿಂದ ಈ ಗೌರವ ನೀಡಲಾಗುತ್ತಿದೆ ಎಂದು ಸಂತೋಷ್ ಸದ್ಗುರು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಂಗವಾಗಿ ನವೆಂಬರ್ 7ರಿಂದ 9ರವರೆಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಅಧಿಕಾರಿಗಳ ತಂಡಗಳ ಮಧ್ಯೆ ಸೌಹಾರ್ದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದರ ಜೊತೆಗೆ, ದೀಪಾವಳಿ ಹಬ್ಬದ ಪ್ರಯುಕ್ತ ನಡೆಸಲಾದ ಹಲವು ಸ್ಪರ್ಧೆಗಳಲ್ಲಿ ಗೆದ್ದ ವಿಜೇತರಿಗೆ ನವೆಂಬರ್ 9ರ ಸಂಜೆ ನಡೆಯುವ ಮುಖ್ಯ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಣೆ ಮಾಡಲಾಗುವುದು.
ಬಹುಮಾನ ವಿತರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿದ ನಂತರ, ಭೀಮನಕೋಣೆ ಗ್ರಾಮದ ಸ್ವರಾಂಜಲಿ ತಂಡದವರಿಂದ ವಿಶೇಷ ಸುಗಮ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದವರು ವಿವರ ನೀಡಿದರು.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
