SHIVAMOGGA | Jan 10, 2024 | ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಹೊಸನಗರ ತಾಲ್ಲೂಕಿನ ಮಾವಿಹೊಳೆ ಕ್ರಾಸ್ನಲ್ಲಿ ಈ ಘಟನೆ ಸಂಭವಿಸಿದೆ.
ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇವತ್ತು ಬೆಳಗ್ಗೆ ನಡೆದ ಘಟನೆಯಲ್ಲಿ ಹೊಸನಗರ ಕಡೆಯಿಂದ ಸಾಗರ ಕಡೆಗೆ ಕಂಟೇನರ್ ಲಾರಿ ಹೋಗುತ್ತಿತ್ತು.
ಹೊಸನಗರ ಪೊಲೀಸ್ ಸ್ಟೇಷನ್
ಆ ಕಡೆಯಿಂದ ಅಂದರೆ, ಸಾಗರ ಕಡೆಯಿಂದ ಹೊಸನಗರ ಕಡೆಗೆ ಬೈಕ್ ಬರುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ.
ಬೈಕ್ ಸವಾರ ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಶಮಂತ್ (25) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಣತಿ ಗ್ರಾಮದ ಮುತ್ತೂರಿನಲ್ಲಿರುವ ಅಕ್ಕನ ಮನೆಗೆ ಮಜ್ಜಿಗೆ ಮೆಣಸಿನಕಾಯಿ ಕೊಟ್ಟು ಹೋಗುತ್ತಿದ್ದ. ಈ ವೇಳೆ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಹೊಸನಗರ ಪೊಲೀಸ್ ಸ್ಟೇಷನ್ ಪಿಎಸ್‌ಐ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.