ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಭದ್ರಾವತಿ ತಾಲ್ಲೂಕಿನ ದೊಡ್ಡೇರಿ ಬಳಿಯ ಗಂಗೂರಿನ ನಿವಾಸಿ, ವನಿಷಾ (21) ಎಂದು ಗುರುತಿಸಲಾಗಿದೆ. ವನಿಷಾ ಅವರು ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಇಂದು ಬೆಳಿಗ್ಗೆ ತಿಂಡಿ ಸೇವಿಸಿದ ವನಿಷಾ, ಹೊಟ್ಟೆ ನೋವಿನ ಕಾರಣ ನೀಡಿ ಕಾಲೇಜಿಗೆ ಹೋಗುವುದಿಲ್ಲ ಎಂದು ವಾರ್ಡನ್‌ಗೆ ತಿಳಿಸಿದ್ದರು. ನಂತರ, ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಹಾಸ್ಟೆಲ್‌ನ ಟೆರೇಸ್ ಮೇಲೆ ತೆರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
- Advertisement -
ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು, ಮೃತದೇಹವನ್ನು ಪರಿಶೀಲಿಸಿ, ಹೆಚ್ಚಿನ ಪ್ರಕ್ರಿಯೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BSc Student Dies


