ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ವಾಟ್ಸಾಪ್ ಪ್ರೊಫೈಲ್ ಡಿಪಿ ಫೋಟೋದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿಕೊಂಡಿದ್ದಕ್ಕೆ ಆತನಿಗೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಎಫ್ಐಆರ್ ಸಹ ದಾಖಲಾಗಿದೆ. ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಉಲ್ಲೇಖಿಸಿರುವಂತೆ , ಕಾಲೇಜಿನ ಕ್ಯಾಂಪಸ್ ಒಳಗಡೆ ಇದ್ದ ವಿದ್ಯಾರ್ಥಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಕರೆ ಮಾಡಿದ್ದಾನೆ. ಅಲ್ಲದೆ ಕರೆಯಲ್ಲಿ ಪ್ರೊಫೈಲ್ ಚಿತ್ರದಲ್ಲಿ ಇಟ್ಟುಕೊಂಡಿದ್ದ ವೀರ ಸಾವರ್ಕರ್ ಅವರ ಫೋಟೋವನ್ನು ತೆಗೆದುಹಾಕುವಂತೆ ಬೆದರಿಕೆ ಹಾಕಿದ್ದಾನೆ. ಜೊತೆಯಲ್ಲಿ ವಿದ್ಯಾರ್ಥಿಯ ವಿಳಾಸ ಕೇಳಿ ಹೆದರಿಸಿದ್ದಾನೆ.ಈ ಸಂಬಂಧ ವಿದ್ಯಾರ್ಥಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಪೊಲೀಸರು ಭಾರತೀಯ ನ್ಯಾಯ ಸಂಹಿತೆ, 2023 ರ ಕಲಂ 352 ಮತ್ತು 351(2) ರ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.ಕರೆಯಲ್ಲಿ ಮಾತನಾಡಿದ ಅಪರಿಚಿತ ವ್ಯಕ್ತಿಯು ತನ್ನ ಹೆಸರು ಬೇರೆ ಹೇಳಿದ್ದು, ಆತನ ನಂಬರ್ ಪರಿಶೀಲಿಸಿದಾಗ ಬೇರೆ ಹೆಸರು ಕಂಡು ಬಂದಿದೆ ಎಂದು ಎಫ್ಐಆರ್ನಲ್ಲಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Savarkar Photo Row Law College Student Receives Death Threat Over WhatsApp Call

