Shivamogga Mar 4, 2024 ಶಿವಮೊಗ್ಗ ವಿನೋಬನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್ನಲ್ಲಿ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ಪೊಲೀಸರ ರೇಡ್ ಆಗಿದೆ.
ಈ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಆಲ್ಕೊಳ ಸರ್ಕಲ್ ಸಮೀಪ ಇರುವ ಮನೆಯೊಂದರ ಮೇಲೆ ಈ ದಾಳಿ ನಡೆದಿದೆ. ಪೊಲೀಸರಿಗೆ ಬಂದ ಮಾಹಿತಿ ಆಧರಿಸಿ ದಾಳಿ ನಡೆದಿದ್ದು ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ.